ಹೊಸದಿಗಂತ ವರದಿ ಶಿವಮೊಗ್ಗ:
ಶತಕೋಟಿ ಶ್ರೀರಾಮ ತಾರಕ ನಾಮ ಜಪ ಯಜ್ಞ ಸಮಿತಿ ವತಿಯಿಂದ ಜನವರಿ 05ರ ಸಂಜೆ 5.30 ಕ್ಕೆ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರ ವಿಷಯವಾಗಿ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ.
ಖ್ಯಾತ ವಾಗ್ಮಿ ಚಕ್ರಚರ್ತಿ ಸೂಲಿಬೆಲೆ ಉಪನ್ಯಾಸ ನೀಡಲಿದ್ದಾರೆ. ನಗರದ ಎನ್ಡಿವಿ ಹಾಸ್ಟೆಲ್ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶತಕೋಟಿ ಶ್ರೀರಾಮ ತಾರಕ ನಾಮ ಜಪ ಯಜ್ನ ಸಮಿತಿ ಪ್ರಧಾನ ಕಾರ್ಯದರ್ಶಿ ನಟರಾಜ ಭಾಗವತ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹಲವು ವರ್ಷಗಳ ಸಂಘರ್ಷದ ನಂತರ ಅಯೋಧ್ಯೆಯಲ್ಲಿ ‘ವ್ಯ ಶ್ರೀರಾಮ ಮಂದಿರ ನಿರ್ಮಾಣ ಆಗುತ್ತಿದೆ. ಜನವರಿ 22 ರಂದು ಶ್ರೀರಾಮ ಲಲಾ ಪ್ರತಿಷ್ಠಾಪನೆಯೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಸಮಿತಿ ಅಧ್ಯಕ್ಷ ಆರ್.ಕೆ.ಸಿದ್ದರಾಮಣ್ಣ, ಸಂಚಾಲಕ ಸುಬ್ರಹ್ಮಣ್ಯ ಭಟ್, ವಿಶ್ವಹಿಂದು ಪರಿಷತ್ ಜಿಲ್ಲಾಧ್ಯಕ್ಷ ಜೆ.ಆರ್.ವಾಸುದೇವ, ಪ್ರಮಯಖರಾದ ಸಚ್ಚಿದಾನಂದ, ಶಬರೀಶ್ ಕಣ್ಣನ್, ಶ್ರೀನಿವಾಸ ಪ್ರಭು, ಶಾರದಾ, ಸುಧೀಂದ್ರ ಕಟ್ಟೆ ಸುದ್ದಿಗೋಷ್ಟಿಯಲ್ಲಿದ್ದರು.