ಇಂದು ಮಂಡ್ಯದಲ್ಲಿ “ಚಕ್ರವರ್ತಿ” ಭರ್ಜರಿ ಪ್ರಚಾರ: ಕುರುಕ್ಷೇತ್ರ ಕಣದಲ್ಲಿ ಯಾರ ಪರ ನಿಂತಿದ್ದಾರೆ “ಸಾರಥಿ”

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ ಕೈಗೊಂಡಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೂ ಪ್ರಚಾರ ನಡೆಸಲು ಮುಂದಾಗಿದ್ದಾರೆ. ಬೆಳಗ್ಗೆ 9:30ಕ್ಕೆ ಮಂಡ್ಯ ಜಿಲ್ಲೆ ಹಲಗೂರು ಪಟ್ಟಣದಿಂದ ಮತಯಾಚನೆಗೆ ಪ್ರಚಾರ ಆರಂಭಿಸಲಿದ್ದಾರೆ.

ಈ ಹಿಂದೆ ದರ್ಶನ್ ಅವರು ಸುಮಲತಾ ಅಂಬರೀಶ್ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದರು. ಬದಲಾದ ರಾಜಕೀಯ ಸನ್ನಿವೇಶದಿಂದಾಗಿ ಸುಮಲತಾ ಅಂಬರೀಶ್ ಈ ಬಾರಿ ಮಂಡ್ಯ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಎನ್‌ಡಿಎ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ.

ನಟರಾದ ದರ್ಶನ್ ಮತ್ತು ಯಶ್ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!