ಪೌರಕಾರ್ಮಿಕರನ್ನು ಖಾಯಂಗೊಳಿಸುವಲ್ಲಿ ಸರ್ಕಾರದ ನಿರ್ಧಾರಕ್ಕೆ ಛಲವಾದಿ ನಾರಾಯಣಸ್ವಾಮಿ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು:
ರಾಜ್ಯದ ಪೌರಕಾರ್ಮಿಕರ ಖಾಯಂಗೊಳಿಸುವ ಮತ್ತು ಅವರ ವಿವಿಧ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರ ಬದ್ಧತೆಯನ್ನು ಪ್ರಕಟಿಸಿಸುವುದು ಅಭಿನಂದನಾರ್ಹ ಎಂದು ವಿಧಾನಪರಿಷತ್ ಸದಸ್ಯ ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಪೌರಕಾರ್ಮಿಕರಿಗೆ 2 ಸಾವಿರ ರೂಪಾಯಿ ಸಂಕಷ್ಟ ಭತ್ಯೆಯನ್ನು ಪ್ರಕಟಿಸಿ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ಮಾಡಿರುವ ಕ್ರಮವನ್ನು ಅವರು ಶ್ಲಾಘಿಸಿದ್ದಾರೆ.
ಬಿಬಿಎಂಪಿ ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಖಾಯಮಾತಿ ವಿಚಾರದಲ್ಲಿ ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಬಿಜೆಪಿ ಸರಕಾರಕ್ಕೆ ಬದ್ಧತೆ ಇರುವ ಕಾರಣ ಇದು ಸಾಧ್ಯವಾಗಿದೆ. ರಾಜ್ಯದ ವಿವಿಧ ಪಾಲಿಕೆ ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಸುಮಾರು 35 ಸಾವಿರ ಪೌರಕಾರ್ಮಿಕರಿಗೆ ಇದರಿಂದ ಪ್ರಯೋಜನ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!