‘ಮಹಾ’ ಸಿಎಂಗೆ ಸವಾಲು: ರಾಣಾ ದಂಪತಿಗೆ 14 ದಿನಗಳ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನೆ ಮುಂದೆ ಹನುಮಾನ್​ ಚಾಲೀಸಾ ಪಠಿಸುವ ಸವಾಲು ಹಾಕಿದ್ದ ಶಾಸಕ ರವಿ ರಾಣಾ ಹಾಗೂ ಅವರ ಪತ್ನಿ ಅಮರಾವತಿ ಸಂಸದೆ ನವನೀತ್ ಕೌರ್​​ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ನೀವೂ ಹನುಮಾನ್ ಚಾಲೀಸಾ ಪಠಿಸಬೇಕು. ಇಲ್ಲ ನಾವೇ ನಿಮ್ಮ ಮನೆ ಮುಂದೆ ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆಂದು ಕಳೆದ ಕೆಲ ದಿನಗಳ ಹಿಂದೆ ನವನೀತ್​-ರಾಣಾ ದಂಪತಿ ಸಿಎಂ ಠಾಕ್ರೆಗೆ ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಮುಂಬೈಗೆ ಆಗಮಿಸಿದ್ದರು. ಆದರೆ ಮೋದಿ ಭೇಟಿ ಹಿನ್ನೆಲೆ ತಮ್ಮ ನಿರ್ಧಾರ ರದ್ದು ಮಾಡುತ್ತಿರುವುದಾಗಿ ಅವರು ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಅವರನ್ನು ನಿನ್ನೆಪೊಲೀಸರು ಬಂಧನ ಮಾಡಿದ್ದಾರೆ.
ಈಗ ಬಾಂದ್ರಾ ನ್ಯಾಯಾಲಯದ ರಜಾ ಪೀಠವು 14 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಸೆಕ್ಷನ್ 34, 124A (ದೇಶದ್ರೋಹ), 153A (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು IPC ಮತ್ತು ಸೆಕ್ಷನ್ 37(1)ದ ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು ಅವರ ವಿರುದ್ಧ ಮಹಾರಾಷ್ಟ್ರ ಪೊಲೀಸ್ ಕಾಯಿದೆಯ 135 ಸೆಕ್ಷನ್ ಪ್ರಕಾರ ಬಂಧನ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!