ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆರ್ ಆರ್ ನಗರ ನಿವಾಸದಲ್ಲಿ ಇಂದು ಬೆಳಗಿನ ಜಾವ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.
ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ದರ್ಶನ್ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.