ಹೊಸದಿಗಂತ ವರದಿ ಮಂಡ್ಯ :
ರಾಜ್ಯದ ಮೂರೂ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತೆ. ಇದರಲ್ಲಿ ಯಾವ ಸಂಶಯವೂ ಬೇಡ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭೇಟಿಯಾದ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೂರು ವಿಧಾನ ಸಭಾ ಕ್ಷೇತ್ರಗಳಲ್ಲಿ ಪೂರ್ಣ ಪ್ರಮಾಣದ ಪ್ರಚಾರ ನಡೆಯುತ್ತಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸಭೆ ಮಾಡಿ ವರದಿ ಕೇಳಿದ್ದರು. ವರದಿ ಕೊಟ್ಟಿದ್ದೇವೆ. ಅಭ್ಯರ್ಥಿ ಕೂಡ ಆಗಿದೆ. ಪಕ್ಷದ ಆದೇಶದ ಮೇರೆಗೆ ಈಗ ಕೆಲಸ. ಚುನಾವಣೆ ನನ್ನ ಅಧ್ಯಕ್ಷತೆಯಲ್ಲಿ ನಡೆಯುವುದಿಲ್ಲ. ಡಿಸಿಎಂ ನೇತೃತ್ವದಲ್ಲಿ ನಡೆಯುತ್ತದೆ. ಸಚಿವರಲ್ಲಿ ನಾನೂ ಒಬ್ಬ ಅವರು ಕೊಟ್ಟ ಜಾಗದಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.