ಚಾಮರಾಜಪೇಟೆ ಈದ್ಗಾ ಮೈದಾನ ಮಾಲಿಕತ್ವ ವಿವಾದ: ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ಮಾಲಿಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಮೈದಾನವನ್ನು ಆಟದ ಮೈದಾನವಾಗಿ ಮಾತ್ರ ಬಳಸಿಕೊಳ್ಳುವಂತೆ ಸೂಚಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನ ಮಾಲೀಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಹಾಗೂ ವಕ್ಫ್ ಬೋರ್ಡ್ ನಡುವೆ ಜಟಾಪಟಿ ನಡೆದಿತ್ತು. ಇದೀಗ ಈ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾ.ಹೇಮಂತ್ ಚಂದನ್ ಗೌಡರ್ ಪೀಠ, ಮೈದಾನ ವಿಚಾರವಾಗಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಆದೇಶ ನೀಡಿದೆ.

ಚಾಮರಾಜಪೇಟೆ ಮೈದಾನವನ್ನು ಆಟದ ಮೈದಾನವಾಗಿ ಮಾತ್ರ ಬಳಸಿಕೊಳ್ಳಬೇಕು. ರಂಜಾನ್, ಬಕ್ರೀದ್ ವೇಳೆ ಮಾತ್ರ ಪ್ರಾರ್ಥನೆಗೆ ಬಳಸಿಕೊಳ್ಳಬಹುದು ಎಂದು ಹೇಳಿ ಮುಂದಿನ ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!