Monday, October 2, 2023

Latest Posts

ಶಾಲೆಯ ಬಿಸಿಯೂಟದಲ್ಲಿ ಗೋಸುಂಬೆ ಪತ್ತೆ: 45 ವಿದ್ಯಾರ್ಥಿಗಳು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಹಾರದ ಸುಪೌಲ್ ಜಿಲ್ಲೆಯ ಶಾಲೆಯೊಂದರಲ್ಲಿ ಮಧ್ಯಾಹ್ನದ ಊಟದಲ್ಲಿ ಗೋಸುಂಬೆ ಪತ್ತೆಯಾಗಿದ್ದು, 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿಗಳನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಪೌಲ್‌ ಜಿಲ್ಲೆಯ ಭೀಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ತುಡಿ ಗ್ರಾಮದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಸೋಮವಾರ ಮಧ್ಯಾಹ್ನದ ಊಟವನ್ನು ವಿದ್ಯಾರ್ಥಿಗಳಿಗೆ ಬಡಿಸಿದ ನಂತರ ವಿಷಯ ಬೆಳಕಿಗೆ ಬಂದಿದ್ದು, ಆಹಾರ ಸೇವಿಸಿದ ಅನೇಕ ವಿದ್ಯಾರ್ಥಿಗಳು ವಾಂತಿ ಮತ್ತು ಹೊಟ್ಟೆ ನೋವು ಎಂದು ದೂರಿದ್ದಾರೆ.

ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ತಕ್ಷಣ 45 ಮಕ್ಕಳನ್ನು ಸಾಮಾನ್ಯ ಆರೋಗ್ಯ ಕೇಂದ್ರ ನರಪತಗಂಜ್‌ಗೆ ಚಿಕಿತ್ಸೆಗಾಗಿ ಕರೆದೊಯ್ದರು. ಅವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಘಟನೆ ತಿಳಿದ ಬಳಿಕ ಭೀಮ್‌ಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಶಾಲೆಗೆ ತಲುಪಿದರು ಮತ್ತು ವಿದ್ಯಾರ್ಥಿಗಳಿಗೆ ಬಡಿಸಿದ ಆಹಾರವನ್ನು ತನಿಖೆ ಮಾಡಿದರು. ಈ ವೇಳೆ ಅದರಲ್ಲಿ ಗೋಸುಂಬೆ ಕಂಡುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!