ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿ ಬಕ್ರೀದ್ ಹಿಂದಿನ ದಿನ ಜನರನ್ನು ಬಕ್ರಾ ಮಾಡಲು ಬೆಲೆ ಏರಿಕೆ ಮಾಡಲಾಗಿದೆ. ಊಸರವಳ್ಳಿಗೂ ನಿಮಗೂ ಸರ್ಧೆ ಮಾಡಿದರೆ ಗೆಲ್ಲೋದು ನೀವೆ ಎಂದು ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣೆ ಬಳಿಕ ತೈಲ ಬೆಲೆ ಹೆಚ್ಚಿಸಿದ ಸರ್ಕಾರದ ನಡೆಗೆ ಬಿಜೆಪಿ ಕೆಂಡಾಮಂಡಲವಾಗಿದೆ. ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಕ್ತದ ರುಚಿ ನೋಡಿದ ಹುಲಿ ಮತ್ತೆ ಮತ್ತೆ ಅದನ್ನೇ ಬಯಸುತ್ತದೆ. ಆಡಳಿತಕ್ಕೆ ಬಂದ ಕೂಡಲೇ ಗೋಸುಂಬೆ ಕೂಡ ನಾಚುವ ರೀತಿ ಬೆಲೆ ಏರಿಸಿ ಕೇಂದ್ರ ಕಡೆ ಬೊಟ್ಟು ಮಾಡಿದ್ದೀರಿ ಮುಖ್ಯಮಂತ್ರಿಗಳೇ? ಊಸರವಳ್ಳಿಗೂ ನಿಮಗೂ ಸ್ಪರ್ಧೆ ಇರಿಸಿದರೆ ಗೆಲ್ಲುವುದು ನೀವೇ, ನಿಮ್ಮ ನಾಲಗೆ ಬಗ್ಗೆ ಜನರಿಗೇ ಗೊತ್ತು ಎಂದು ಹೇಳಿದ್ದಾರೆ.
BJP in Central government also raised petrol rate. Y were u silent.
This is called hypocrisy.