Wednesday, June 29, 2022

Latest Posts

 ಚಂಪಾ ಷಷ್ಠಿ: ಮದ್ಯ ಮಾರಾಟವಿಲ್ಲ

ಹೊಸ ದಿಗಂತ ವರದಿ, ಮಂಗಳೂರು:

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ಪ್ರಯುಕ್ತ ಡಿ. 10ರ ತನಕ ನಡೆಯಲಿರುವ ರಥೋತ್ಸವಗಳ ಸಮಯದಲ್ಲಿ ಅಪಾರ ಭಕ್ತಾದಿಗಳು ಸೇರಲಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಚಾಡಿ ಬಳಿಯಿರುವ ಪ್ರಶಾಂತ್ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಬೆಳ್ಳಿ ಬಾರ್ ಅಂಡ ರೆಸ್ಟೋರೆಂಟ್ ಅನ್ನು ಡಿ.8 ರ ಬೆಳಿಗ್ಗೆ 6ರಿಂದ 9ರ ಮಧ್ಯರಾತ್ರಿ 12 ಗಂಟೆವರೆಗೆ ಮುಚ್ಚುವಂತೆ ಆದೇಶಿಸಲಾಗಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss