ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಚಂಪೈ ಸೊರೆನ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಂಚಿ ಮತ್ತು ಜಾರ್ಖಂಡ್‌ನ ರಾಜಭವನದ ದರ್ಬಾರ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಿತು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಭೂಕಬಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿದ್ದು, ಈಗಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕಾರಣಕ್ಕಾಗಿ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಯಿತು.