ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ (Champai Soren) ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸ ಮತದ ಪರೀಕ್ಷೆಯಲ್ಲಿ ಗೆದ್ದಿದ್ದಾರೆ.
81 ಶಾಸಕರ ಪೈಕಿ 47 ಶಾಸಕರ ಬೆಂಬಲ ಪಡೆಯುವ ಮೂಲಕ ಅವರು ಯಶಸ್ವಿಯಾಗಿ ಬಹುಮತ ಸಾಬೀತುಪಡಿಸಿದ್ದಾರೆ. ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಬಹುಮತ ಘೋಷಿಸಿದ ಬೆನ್ನಲ್ಲೇ ಶಾಸಕರು ಹರ್ಷೋದ್ಗಾರಗಳೊಂದಿಗೆ ಮುಖ್ಯಮಂತ್ರಿಯನ್ನು ಅಭಿನಂದಿಸಿದರು.
ಜಾರ್ಖಂಡ್ (Jharkhand) ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಕರೆದ ಆಪಾದಿತ ಭೂ ಹಗರಣದಲ್ಲಿ ಪ್ರಸ್ತುತ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಹೇಮಂತ್ ಸೊರೇನ್ ಅವರು ಸೋಮವಾರದ ವಿಶ್ವಾಸ ಮತಕ್ಕೆ ಹಾಜರಾಗಿದ್ದರು. ಪಿಎಂಎಲ್‌ಎ ನ್ಯಾಯಾಲಯವು ಅದರಲ್ಲಿ ಭಾಗವಹಿಸಲು ಅನುಮತಿ ನೀಡಿದ ನಂತರ ಮತ ಚಲಾಯಿಸಲು ವಿಧಾನಸಭೆಗೆ ಆಗಮಿಸಿದ್ದರು.