ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ (ಜೆಎಂಎಂ ನಾಯಕ) ಮತ್ತು ಸಿಬು ಸೋರೆನ್ ಬೆಂಬಲಿಗ ಚಂಪಯಿ ಸೋರೆನ್ ಶುಕ್ರವಾರ ಫೆ. 2 ಸಾಕಷ್ಟು ಹೈಡ್ರಾಮಾ ನಡುವೆ ಜಾರ್ಖಂಡ್ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗುರುವಾರ ಸಂಜೆ ಜಾರ್ಖಂಡ್ ರಾಜ್ಯಪಾಲರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದರು ಮತ್ತು ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದರು. ಸರ್ಕಾರ ರಚಿಸಲು ಶಾಸಕರ ಬೆಂಬಲವಿದ್ದರೂ ರಾಜ್ಯಪಾಲರು ಆಹ್ವಾನ ನೀಡಿಲ್ಲ ಎಂಬ ಆರೋಪ ಕೇಳಿಬಂದಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಿಎಂ ಹೇಮಂತ್ ಸೋರೆನ್ ಅವರನ್ನು ಕಾನೂನು ಜಾರಿ ಸಂಸ್ಥೆಗಳು ಬಂಧಿಸಿದ್ದವು. ಹೀಗಾಗಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ ಶಾಸಕರು ಆಗ ಸಾರಿಗೆ ಸಚಿವರಾಗಿದ್ದ ಚಂಪಯಿ ಸೋರೆನ್ ಅವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ.