Champions Trophy | ಉಭಯ ತಂಡಗಳ ಮುಖಾಮುಖಿ, ಮಹಾ ಸಮರಕ್ಕೆ ಕೌಂಟ್ ಡೌನ್ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರಿಕೆಟ್ ಅಂಗಳದ ಮಹಾ ಸಮರಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇಂದು ಮಧ್ಯಾಹ್ನ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್​ಗೇರುವುದು ಬಹುತೇಕ ಖಚಿತ. ಅತ್ತ ಪಾಕಿಸ್ತಾನ್ ತಂಡ ಸೋತರೆ ಟೂರ್ನಿಯಿಂದಲೇ ಹೊರಬೀಳಲಿದೆ.

ಭಾರತ ಮತ್ತು ಪಾಕಿಸ್ತಾನ್ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 135 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ ಗೆದ್ದಿರುವುದಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಪಾಕಿಸ್ತಾನ್ ತಂಡವೇ ಗೆದ್ದಿದೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲೂ ಪಾಕ್ ಪಡೆ ಹೆಚ್ಚಿನ ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!