ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಂಪಿಯನ್ಸ್ ಟ್ರೋಫಿಯಲ್ಲಿ ಆಂಗ್ಲ ಪಡೆಗೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಬಲಿಷ್ಠ ಪಡೆ ಕಟ್ಟಿಕೊಂಡು ಚಾಂಪಿಯನ್ಸ್ ಟ್ರೋಫಿಗೆ ಕಾಲಿಟ್ಟಿದ್ದ ನಾಯಕ ಜೋಸ್ ಬಟ್ಲರ್, ಈ ಟೂರ್ನಿ ಮುಗಿಯುವುದಕ್ಕೂ ಮುನ್ನವೇ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದರು.
ಗುಂಪು ಹಂತದ ತನ್ನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಏಕಪಕ್ಷೀಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿತು. ಆದರೆ ಈ ಗೆಲುವಿನೊಂದಿಗೆ ಅದು ತನ್ನ ಗ್ರೂಪ್ ಬಿ ನಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿತು. ಇದರಿಂದಾಗಿ ದಕ್ಷಿಣ ಆಫ್ರಿಕಾ ತಂಡ ಮಾರ್ಚ್ 5 ರಂದು ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯವನ್ನು ಆಡಲಿದೆ.