ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಪ್ರಾಯೋಜಿತ ಚಾಂಪಿಯನ್ಸ್ ಟ್ರೋಫಿ ಕ್ರೀಡಾಕೂಟ ಇಂದಿನಿಂದ ಶುರುವಾಗುತ್ತಿದೆ. ಮೊದಲ ಪಂದ್ಯ ಆತಿಥೇಯ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ ವಿರುದ್ಧ ಕರಾಚಿ ಮೈದಾನದಲ್ಲಿ ಆರಂಭವಾಗಲಿದೆ.
ಭಾರತ ತನ್ನ ಮೊದಲ ಪಂದ್ಯವನ್ನು ದುಬೈನಲ್ಲಿ ಫೆ.20ರಂದು ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಇನ್ನು ಏಕದಿನ ಮಾದರಿಯ ಚಾಂಪಿಯನ್ಸ್ ಟ್ರೋಫಿ ಟೀಂ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರಿಗೆ ಕೊನೆಯ ಟೂರ್ನಿ ಆಗುವ ಎಲ್ಲಾ ಸಾಧ್ಯತೆಗಳೂ ಇವೆ.
2013ರಲ್ಲಿ ಎಂ.ಎಸ್ ಧೋನಿ ನಾಯಕತ್ವದಲ್ಲಿ ಭಾರತ ಟ್ರೋಫಿಗೆ ಮುತ್ತಿಟ್ಟಾಗಲೂ ಈ ಮೂವರು ಟೂರ್ನಿಯಲ್ಲಿದ್ದರು. ಈ ಬಾರಿ ಟ್ರೋಫಿ ಗೆದ್ದು ಗೆಲುವಿನ ವಿದಾಯ ಹೇಳುವರೇ ಎಂಬುದನ್ನು ಕಾದುನೋಡಬೇಕಿದೆ.