ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಗೆಲುವಿನ ಶುಭಾರಂಭ ಮಾಡಿದೆ.
ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 6 ವಿಕೆಟ್ಗಳಿಂದ ಮಣಿಸಿ ಗೆಲುವಿನೊಂದು ತನ್ನ ಅಭಿಯಾನ ಆರಂಭಿಸಿದೆ.
ಬಾಂಗ್ಲಾದೇಶ ನೀಡಿದ್ದ 229ರನ್ಗಳ ಗುರಿಯನ್ನ 46.3 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ತಲುಪಿತು. ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್ ಶತಕ ಸಿಡಿಸಿ ಗೆಲುವಿನ ರೂವಾರಿಯಾದರು.
229ರನ್ಗಳ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ಪವರ್ ಪ್ಲೇ ಉತ್ತಮವಾಗಿ ಬಳಸಿಕೊಂಡಿ ಅದ್ಭುತ ಆರಂಭ ಪಡೆದುಕೊಂಡಿತು. ನಾಯಕ ರೋಹಿತ್ ಉಪನಾಯಕ ಗಿಲ್ ಮೊದಲ ವಿಕೆಟ್ಗೆ 69 ರನ್ಗಳ ಜೊತೆಯಾಟ ನೀಡಿದರು. ರೋಹಿತ್ 36 ಎಸೆತಗಳಲ್ಲಿ 7 ಬೌಂಡರಿ ಸಹಿತ 41 ರನ್ಗಳಿಸಿ ಔಟ್ ಆದರು. ಬಳಿಕ ಬಂದ ವಿರಾಟ್ ಕೊಹ್ಲಿ 22 ರನ್ ಗಳಿಸಿದರು. ಶ್ರೇಯಸ್ ಅಯ್ಯರ್ 15 ರನ್ ಗೆ ವಿಕೆಟ್ ಒಪ್ಪಿಸಿದರೆ , ಅಕ್ಷರ್ ಪಟೇಲ್ 8 ರನ್ ಗೆ ಔಟಾದರು.
ಬಳಿಕ ಗಿಲ್ ಗೆ ಜೊತೆಯಾದ ರಾಹುಲ್ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು. ರಾಹುಲ್ 41 ರನ್ ಗಳಿಸಿದರೆ, ಗಿಲ್ 101 ರನ್ ಗಳಿಸಿ ಅಜೇಯರಾಗಿ ಉಳಿದರು.