ಹೊಸದಿಗಂತ ಡಿಜಿಟಲ್ ಡೆಸ್ಕ್:
2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ಆಯೋಜನೆಗೆ ಸಂಬಂಧಿಸಿದಂತೆ ಉಂಟಾಗಿದ್ದ ಗೊಂದಲಗಳಿಗೆ ಇಂದು ಐಸಿಸಿ ತೆರೆ ಎಳೆದಿದೆ.
ಪಿಸಿಬಿ ಮತ್ತು ಬಿಸಿಸಿಐ ನಡುವಿನ ಒಪ್ಪಂದದ ನಂತರ 2025ರ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಒಪ್ಪಿದೆ. ಪಂದ್ಯಗಳನ್ನು ಪಾಕಿಸ್ತಾನ ಮತ್ತು ದುಬೈನಲ್ಲಿ ಆಯೋಜಿಸಲಾಗುವುದು.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಒಂದು ಷರತ್ತಿಗೆ ಒಪ್ಪಿಗೆ ಸೂಚಿಸಿರುವ ಐಸಿಸಿ, ಚಾಂಪಿಯನ್ಸ್ ಟ್ರೋಫಿಯನ್ನ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಆಯೋಜನೆಯ ಬಗ್ಗೆ ಐಸಿಸಿ ಮತ್ತು ಪಿಸಿಬಿ ನಡುವೆ ಒಪ್ಪಂದ ನಡೆದಿದೆ. ಆ ಒಪ್ಪಂದದ ಪ್ರಕಾರ, 2026 ರಲ್ಲಿ ಭಾರತದಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್ ಆಡಲು ಪಾಕಿಸ್ತಾನ ತಂಡ ಭಾರತಕ್ಕೆ ಬರುವುದಿಲ್ಲ. ಅಂದರೆ ಇದೀಗ ಟೀಂ ಇಂಡಿಯಾದ ಪಂದ್ಯಗಳನ್ನು ಹೇಗೆ ಬೇರೆಡೆ ಆಯೋಜಿಸಲಾಗುತ್ತಿದೆಯೋ ಹಾಗೆಯೇ ಪಾಕಿಸ್ತಾನದ ಪಂದ್ಯಗಳನ್ನು ಸಹ ಬೇರಡೆ ಆಯೋಜಿಸಬೇಕಾಗುತ್ತದೆ.
ಪಿಸಿಬಿ ಮತ್ತು ಬಿಸಿಸಿಐ ಜೊತೆ ಒಪ್ಪಂದ ಮಾಡಿಕೊಂಡ ನಂತರ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಐಸಿಸಿ ಅನುಮೋದನೆ
ಪಾಕಿಸ್ತಾನದ ಮೂರು ಸ್ಥಳಗಳಲ್ಲಿ ಪಂದ್ಯಗಳು ಮತ್ತು ದುಬೈನಲ್ಲಿ ಭಾರತ ಪಂದ್ಯಗಳು ನಡೆಯಲಿವೆ
2026 ರ ಟಿ 20 ವಿಶ್ವಕಪ್ನಲ್ಲಿ ಭಾರತ-ಪಾಕಿಸ್ತಾನ ಪಂದ್ಯಕ್ಕಾಗಿ ಪಾಕಿಸ್ತಾನವು ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಮತ್ತು ಪಿಸಿಬಿ ತಾತ್ವಿಕವಾಗಿ ಒಪ್ಪಿಕೊಂಡಿವೆ. ಸಹ ಆತಿಥ್ಯ ವಹಿಸಿರುವ ಶ್ರೀಲಂಕಾದಲ್ಲಿ ಈ ಪಂದ್ಯ ನಡೆಯಲಿದೆ.