ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಫೆಬ್ರವರಿ 19ರಿಂದ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ-ಪಾಕ್ ನಡುವೆ ಹೈ ವೋಲ್ಟೇಜ್ ಮ್ಯಾಚ್ ನಡೆಯಲಿದೆ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಆತಿಥ್ಯ ವಹಿಸಿಕೊಂಡಿದೆ. ಆದರೆ, ಭಾರತ ಪಾಕ್ಗೆ ತೆರಳಲು ಹಿಂದೇಟು ಹಾಕುತ್ತಿರುವ ಕಾರಣ ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲಾಗುತ್ತಿದೆ.
ಭಾರತ ಆಡುವ ಎಲ್ಲಾ ಪಂದ್ಯಗಳು ಪಾಕಿಸ್ತಾನದ ಬದಲಿಗೆ ದುಬೈನಲ್ಲಿ ನಡೆಯಲಿವೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗಿಯಾಗುತ್ತಿವೆ. ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.
ಭಾರತ-ಪಾಕ್ ನಡುವಿನ ಮಹತ್ವದ ಪಂದ್ಯಕ್ಕಾಗಿ ಆನ್‌ಲೈನ್‌ನಲ್ಲಿ ಟಿಕೆಟ್ಗಳನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ. ಒಂದೂವರೆ ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಟಿಕೆಟ್‌ಗಳಿಗಾಗಿ ಆನ್‌ಲೈನ್‌ನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಕಾದಿದ್ದು, ಟಿಕೆಟ್ ಸಿಗದೆ ನಿರಾಶರಾಗಿದ್ದಾರೆ. ಈ ಮೈದಾನದಲ್ಲಿ 25,000 ಸಾವಿರ ಜನರು ಮಾತ್ರ ಕುಳಿತುಕೊಳ್ಳುವ ಸಾಮರ್ಥ್ಯವಿದ್ದ ಕಾರಣ ಹಲವಾರು ಜನರಿಗೆ ಟಿಕೆಟ್ ಸಿಗಲಿಲ್ಲ.
ಪ್ಲಾಟಿನಂ ವಿಭಾಗದ ಟಿಕೆಟ್‌ಗಳು 2,000 ದಿರ್ಹಮ್‌ಗಳು ಅಂದರೆ ಭಾರತೀಯ ರೂಪಾಯಿಯಲ್ಲಿ ₹47,434. ಗ್ರ್ಯಾಂಡ್ ಲೌಂಜ್ ವಿಭಾಗದ ಟಿಕೆಟ್‌ಗಳು 5,000 ದಿರ್ಹಮ್‌ಗಳು (₹1.8 ಲಕ್ಷ) ಆಗಿದ್ದರೂ ಅವು ಕೂಡಾ ಬೇಗನೆ ಮಾರಾಟವಾದವು.