ಹೊಸದಿಗಂತ ಡಿಜಿಟಲ್ ಡೆಸ್ಕ್:
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಈಗಷ್ಟೇ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ವರೆಗೂ ಉಭಯ ತಂಡಗಳ ನಡುವೆ ಚಾಂಪಿಯನ್ಸ್ ಟ್ರೋಫಿಯಲ್ಲಿ 4 ಪಂದ್ಯಗಳು ನಡೆದಿದ್ದು, 2ರಲ್ಲಿ ಭಾರತ, 1ರಲ್ಲಿ ಆಸೀಸ್ ಗೆದ್ದಿದೆ. ಇವತ್ತಿನ ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ.
ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಮ್ಯಾಥ್ಯೂ ಶಾರ್ಟ್ ಹಾಗೂ ಸ್ಪೆನ್ಸರ್ ಜಾನ್ಸನ್ ಬದಲಿಗೆ ಕೂಪರ್ ಕಾನ್ಲಿ ಹಾಗೂ ಸಂಗಾ ಕೂಡಿಕೊಂಡಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದಿದೆ.
ಭಾರತ ಕ್ರಿಕೆಟ್ ತಂಡವು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಬರೋಬ್ಬರಿ 14ನೇ ಬಾರಿ ಸತತವಾಗಿ ಟಾಸ್ ಸೋಲುವ ಮೂಲಕ ವಿಚಿತ್ರ ದಾಖಲೆಗೆ ಪಾತ್ರವಾಗಿದೆ.