spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆದಿಚುಂಚನಗಿರಿ ಶಾಖಾ ಮಠದಲ್ಲಿ ಚಾಮುಂಡೇಶ್ವರಿ ಮೆರವಣಿಗೆಯೊಂದಿಗೆ ನವರಾತ್ರಿ ಉತ್ಸವಕ್ಕೆ ತೆರೆ

- Advertisement -Nitte

ಹೊಸ ದಿಗಂತ ವರದಿ, ಮಂಡ್ಯ:

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗಂಗಾಧರೇಶ್ವರಸ್ವಾಮಿ ದೇವಾಲಯದಲ್ಲಿ ಶ್ರೀ ಚಾಮುಂಡೇಶ್ವರಿ ಉತ್ಸವದೊಂದಿಗೆ ನವರಾತ್ರಿ ಉತ್ಸಮಕ್ಕೆ ಇಂದು ತೆರೆ ಬಿದ್ದಿತು.
ಶಾಖಾ ಮಠದ ಶ್ರೀ ಪುರುಷೋತ್ತಮನಂದನಾಥ ಸ್ವಾಮೀಜಿ ಮಾತನಾಡಿ, ದುರ್ಗಾಷ್ಟಮಿ ಚಾಮುಂಡೇಶ್ವರಿಯ ನವರಾತ್ರಿ ಉತ್ಸವದ ಪ್ರಮುಖ ಭಾಗ. ಭಾರತದಲ್ಲಿ ಎಲ್ಲ ಶಕ್ತಿ ಕೇಂದ್ರಗಳಲ್ಲೂ ದುರ್ಗಾಷ್ಠಮಿಯನ್ನು ಪ್ರಧಾನವಾಗಿ ಆಚರಿಸಲಾಗುತ್ತದೆ. ಕರ್ನಾಟಕದಲ್ಲೂ ದಸರಾವನ್ನು ರಾಜ ಮಹಾರಾಜರು ಆಚರಿಸುತ್ತಾ ಬಂದಿದ್ದಾರೆ. ಅದೇ ರೀತಿ ಸರ್ಕಾರ ಅದನ್ನು ಮುಂದುವರಿಸಿದೆ.
ದಶಮಿಯಂದು ದಸರಾ ಆಚರಿಸಲಾಗುತ್ತದೆ. ಕೋವಿಡ್‌ನಿಂದಾಗಿ ಸರಳವಾಗಿ ನಡೆಸಲಾಗುತ್ತಿದೆ ಎಂದರು.
ಅದೇ ರೀತಿ ಶಂಕರಪುರದ ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲೂ ನವರಾತ್ರಿ ಉತ್ಸವವನ್ನು ಆಚರಿಸುತ್ತಿದ್ದೇವೆ. ಇಂದು ಶ್ರೀ ಚಾಮುಂಡೇಶ್ವರಿ ಉತ್ಸವವನ್ನು ನಡೆಸಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ ಭಕ್ತರಿಗೆ ಬನ್ನಿ ಎಲೆಗಳನ್ನು ಪ್ರಸಾದದವಾಗಿ ನೀಡಿ ಉತ್ಸವವನ್ನು ಸಮಾಪ್ತಿಗೊಳಿಸುತ್ತಿದ್ದೇವೆ ಎಂದು ಹೇಳಿದರು.
ಪ್ರಧಾನ ಅರ್ಚಕರಾದ ಮಂಜುನಾಥ್, ಪ್ರಭು, ನಾರಾಯಣ್, ಕಾಂತರಾಜು, ಯೋಗ ಶಿಕ್ಷಕ ಮಂಜುನಾಥ್, ತಾಂಡವ ಇತರರು ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss