ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಮೋ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಅಧಿದೇವತೆ ಚಾಮುಂಡೇಶ್ವರಿಯ ದರುಶನ ಪಡೆದ್ದಾರೆ. ಈ ಅಪೂರ್ವ ಘಳಿಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ದೇಶದ ಮೊದಲ ಪ್ರಧಾನ ಮಂತ್ರಿ ಎನಿಸಿಕೊಳ್ಳುವ ಮೂಲಕ ಮೋದಿ, ಇತಿಹಾಸದ ಸ್ವರ್ಣಪುಟಗಳಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಪ್ರಧಾನಿಯವರ ಪ್ರವಾಸಪಟ್ಟಿಯಲ್ಲಿ ಮೈಸೂರು ನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ ಮಾತ್ರ ನಿರ್ಧಾರವಾಗಿತ್ತು. ಈ ನಡುವೆ ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಾಯಕರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯಬೇಕು ಎನ್ನುವ ಉದ್ದೇಶದಿಂದ ಪ್ರಧಾನಿಯವರಿಗೆ ಮನವಿ ಮಾಡಿದ್ದು, ಅದರಂತೆ ಇದೀಗ ಚಾಮುಂಡಿಬೆಟ್ಟಕ್ಕೆ ಮೋದಿಯವರು ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!