ಚುನಾವಣೆ ಹೊಸ್ತಿಲಲ್ಲೇ ರಾಜ್ಯಕ್ಕೆ ‘ಚಾಣಕ್ಯ’ನ ಭೇಟಿ: ಪ್ರತಿಪಕ್ಷಗಳ ಎದೆಬಡಿತ ಹೆಚ್ಚಿಸಿದ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿಯ ಚುನಾವಣಾ ಚಾಣಕ್ಯ ಅಮಿತ್ ಶಾ ಮೈಸೂರು ಭೇಟಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಉಂಟುಮಾಡಿದೆ.

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ ರಾಜ್ಯಕ್ಕೆ ಆಗಮಿಸಿರುವ ಶಾ, ಪ್ರತಿಪಕ್ಷಗಳ ಎದೆಬಡಿತ ಇನ್ನಷ್ಟು ಹೆಚ್ಚಿಸಿದ್ದಾರೆ.

ಇಂದು ಅಮಿತ್ ಶಾ, ರಾಜ್ಯ ಬಿಜೆಪಿ ನಾಯಕರ ಜೊತೆ ಸಭೆ ನಡೆಸಲಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಬಹಳಷ್ಟು ಮಹತ್ವ ಪಡೆದುಕೊಂಡಿದೆ. ಪೂರ್ವನಿಯೋಜಿತ ಕಾರ್ಯಕ್ರಮದ ಹಿನ್ನೆಲೆ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಹೊರತುಪಡಿಸಿ ರಾಜ್ಯದ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ವಿಚಾರವಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!