ಹೊಸದಿಗಂತ ಡಿಜಿಟಲ್ ಡೆಸ್ಕ್:
ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಹೆಚ್ಚಿನ ಗುಡುಗು ಮತ್ತು ಧೂಳು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಗುಡುಗು ಅಥವಾ ಧೂಳಿನ ಬಿರುಗಾಳಿಯಿಂದಾಗಿ ಮರ ಬೀಳುವುದು, ಹೋರ್ಡಿಂಗ್ ಬೀಳುವುದು ಅಥವಾ ಇನ್ಯಾವುದೇ ಅಹಿತಕರ ಘಟನೆಗಳು ಸಂಭವಿಸಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದೀರ್ಘಕಾಲದ ಬಿಸಿ ಮತ್ತು ಶುಷ್ಕ ವಾತಾವರಣ ಹಾಗೂ ಕಡಿಮೆ ಆರ್ದ್ರತೆಯಿಂದಾಗಿ, ಮಹಾರಾಷ್ಟ್ರ, ಗುಜರಾತ್ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಧೂಳು ಸಹಿತ ಬಿರುಗಾಳಿಗಳು ವರದಿಯಾಗುತ್ತಿವೆ. ಮುಂದಿನ ದಿನಗಳಲ್ಲಿ ಇಂತಹ ಚಂಡಮಾರುತಗಳು ಹೆಚ್ಚು ಸಂಭವಿಸಬಹುದು. ಮಾನ್ಸೂನ್ ಪ್ರಾರಂಭವಾಗುವವರೆಗೆ ಘಾಟ್‌ಗಳು ಮತ್ತು ದಕ್ಷಿಣ ಪರ್ಯಾಯ ದ್ವೀಪ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಇಲಾಖೆ ನೀಡಿದೆ.