ಈ ಜಿಲ್ಲೆಗಳಲ್ಲಿ ಇಂದು ಮಳೆ ಬರುವ ಸಾಧ್ಯತೆ, ನಿಮ್ಮೂರಲ್ಲೂ ಮಳೆ ಬರಬಹುದಾ ನೋಡಿ…

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಉದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದೆಡೆ ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮಳೆಯ ಸೂಚನೆ ಇಲ್ಲ, ಶುಭ್ರ ಆಕಾಶ ಕಾಣಿಸಲಿದೆ. ಇನ್ನು ಕಲಬುರಗಿಯಲ್ಲಿ ಅತಿ ಗರಿಷ್ಠ 39.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!