ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದ್ದು, ದಕ್ಷಿಣ ಆಫ್ರಿಕಾದಲ್ಲಿ ಟಿ20 ಸರಣಿ ಗೆಲ್ಲುವ ಅವಕಾಶ ಟೀಂ ಇಂಡಿಯಾಕ್ಕಿದೆ. ಇತ್ತ ದಕ್ಷಿಣ ಆಫ್ರಿಕಾ ಕೂಡ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು 2-2 ರಿಂದ ಸಮಬಲಗೊಳಿಸುವ ಇರಾದೆಯಲ್ಲಿದೆ.
ದಕ್ಷಿಣ ಆಫ್ರಿಕಾ: ರಿಯಾನ್ ರೆಕ್ಲೆಸ್ಟೋನ್, ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಮಾರ್ಕೆ ಜೆನ್ಸನ್, ಜೆರಾಲ್ಡ್ ಕೊಯೆಟ್ಜಿ, ಆಂಡಿಲ್ ಸಿಮೆಲೇನ್, ಕೇಶವ್ ಮಹಾರಾಜ್, ಲುಥೋ ಸಿಪಾಮ್ಲಾ.
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ರಮಣದೀಪ್ ಸಿಂಗ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ.