ಪಶ್ಚಿಮ ಬಂಗಾಳದ ವಿವಿ ಗಳಿಗೆ ರಾಜ್ಯಪಾಲರ ಬದಲು ಮುಖ್ಯಮಂತ್ರಿ ಕುಲಪತಿ: ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಪಶ್ಚಿಮ ಬಂಗಾಳದ ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳನ್ನು ಕುಲಪತಿಯನ್ನಾಗಿ ನೇಮಕ ಮಾಡುವ ಮಸೂದೆಯನ್ನು ಸೋಮವಾರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅಂಗೀಕರಿಸಸಿದೆ.
ಮಸೂದೆಯ ಪರವಾಗಿ 182 ಮತಗಳು ಹಾಗೂ ವಿರುದ್ಧವಾಗಿ ಕೇವಲ 40 ಮತಗಳು ಚಲಾವಣೆಯಾಗಿವೆ.
ಇಂದು ವಿಧಾನಸಭೆಯಲ್ಲಿ ಪಶ್ಚಿಮ ಬಂಗಾಳ ವಿಶ್ವವಿದ್ಯಾಲಯ ಕಾನೂನು(ತಿದ್ದುಪಡಿ) ಮಸೂದೆ, 2022 ಅನ್ನು ಮಂಡಿಸಿ ಮಾತನಾಡಿದ ರಾಜ್ಯ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರು, ಮುಖ್ಯಮಂತ್ರಿಯವರು ಕುಲಪತಿಯಾಗಿ ಅಧಿಕಾರ ವಹಿಸಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
ಪ್ರಸ್ತುತ ವಿವಿಗಳ ಕುಲಪತಿಯಾಗಿರುವ ರಾಜ್ಯಪಾಲ ಜಗದೀಪ್ ಧನಕರ್ ಅವರು ವಿವಿಧ ಸಂದರ್ಭಗಳಲ್ಲಿ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಚಿವ ಬ್ರಾತ್ಯ ಬಸು ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!