ನೂತನ ಏಳು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕ: ಸಚಿವ ಅಶ್ವತ್ಥನಾರಾಯಣ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ. ಬಿ.ಕೆ. ರವಿ ಅವರನ್ನು ಕೊಪ್ಪಳ ವಿವಿಗೆ, ಬಾಗಲಕೋಟೆಯ ತೋಟಗಾರಿಕೆ ವಿವಿಯ ಡಾ. ಅಶೋಕ್​ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿಗೆ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ. ಎಂ.ಆರ್​. ಗಂಗಾಧರ ಅವರನ್ನು ಚಾಮರಾಜನಗರ ವಿವಿಗೆ, ಬೆಳಗಾವಿಯ ಕೆ.ಎಸ್‌. ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಆನಂದ್‌ ಶರದ್‌ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿಗೆ ಕುಲಪತಿಗಳಾಗಿ ನೇಮಕ ಮಾಡಲಾಗಿದೆ.

ಕುವೆಂಪು ವಿವಿಯ ಡಾ. ಬಿ. ಎಸ್‌. ಬಿರಾದಾರ್​ ಅವರನ್ನು ಬೀದರ್​ ವಿ.ವಿ.ಗೆ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ ವಿಭಾಗದ ಡಾ. ಸುರೇಶ್‌ ಎಚ್‌. ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿಗೆ ಮತ್ತು ಧಾರವಾಡದ ಕರ್ನಾಟಕ ವಿವಿಯ ನಿವೃತ್ತ ಪ್ರೊಫೆಸರ್ ಆಗಿರುವ ಡಾ. ಟಿ.ಸಿ. ತಾರಾನಾಥ್‌ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!