ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ರ್‍ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ತಮ್ಮ 4 ವರ್ಷಗಳ ದಾಂಪತ್ಯವನ್ನು ಕೊನೆ ಮಾಡಿದ್ದಾರೆ.
ಫ್ಯಾಮಿಲಿ ಕೋರ್ಟ್‌ನಲ್ಲಿ ಗುರುವಾರ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದ ಇವರಿಗೆ ಕೋರ್ಟ್ ಇಂದು ವಿಚ್ಛೇದನ ಮಂಜೂರು ಮಾಡಿದೆ.
ಇದರ ಬೆನ್ನಲ್ಲಿಯೇ ಮಾಜಿ ದಂಪತಿಗಳು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಇಬ್ಬರೂ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ತಮ್ಮ ನಾಲ್ಕು ವರ್ಷದ ದಾಂಪತ್ಯ ಪರಸ್ಪರ ಒಪ್ಪಿಗೆಯ ಮೇರೆಗೆ ಅಂತ್ಯವಾಗಿದೆ. ಎಲ್ಲರಿಗೂ ಥ್ಯಾಂಕ್ಸ್ ಎನ್ನುವ ನೋಟ್ ಬರೆದಿದ್ದಾರೆ.
‘ಈ ದಿನ, ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನ ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ,ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೆವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು’ ಎಂದು ನಿವೇದಿತಾ ಗೌಡ ಇನ್ಸ್‌ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.
ನಿವೇದಿತಾ ಗೌಡ ಅವರು ಪೋಸ್ಟ್ ಮಾಡಿದ ರೀತಿಯಲ್ಲೇ ಚಂದನ್ ಗೌಡ ಕೂಡ ಪೋಸ್ಟ್ ಮಾಡಿದ್ದಾರೆ. ಆ ಮೂಲಕ ತಮ್ಮ ವಿಚ್ಛೇದನದ ಬಗ್ಗೆ ಅಧಿಕೃತವಾಗಿ ಇಬ್ಬರೂ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.