ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂನ್ನು ನೋಡಲು ಕೋಟ್ಯಂತರ ಅಭಿಮಾನಿಗಳು ಆಗಮಿಸಿದ್ದರು, ಇದರಲ್ಲಿ ನಟ, ರ್ಯಾಪರ್ ಚಂದನ್ ಶೆಟ್ಟಿ ಕೂಡ ಒಬ್ಬರು.
ಅಲ್ಲಿ ನಡೆದ ಘಟನೆಗಳು, ಸಂದರ್ಭವನ್ನು ಚಂದನ್ ವಿವರಿಸಿದ್ದಾರೆ. ನಾನು ಕೂಡ ಜನರ ಮಧ್ಯೆ ಸಿಕ್ಕಿಹಾಕಿಕೊಂಡಿದ್ದೆ. ಉಸಿರಾಡೋಕು ಕಷ್ಟವಾಯ್ತು ಎಂದು ಹೇಳಿದ್ದಾರೆ.
ಗೇಟ್ ನಂಬರ್ 3ರಲ್ಲಿ ಹೋಗಲು ನನಗೆ ಪಾಸ್ ಸಿಕ್ಕಿತ್ತು. ಗೇಟ್ ನಂಬರ್ 3ಕ್ಕೆ ತಲುಪಲು ಆಗಲೇ ಇಲ್ಲ, ಅಷ್ಟು ಜನ ಸೇರಿದ್ದರು. ಗೇಟ್ ನಂಬರ್ 10ಕ್ಕೆ ಹೋದೆ, ಅಲ್ಲೂ ತುಂಬಾ ಜನರಿದ್ದರು. ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯಿತು ಎಂದಿದ್ದಾರೆ.