Sunday, December 4, 2022

Latest Posts

ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್‌ ಸಿಂಗ್‌ ಹೆಸರು ಮರುನಾಮಕರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ದೇಶದ ಅಪ್ರತಿಮ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ಅವರ 115ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಚಂಡೀಗಢ ವಿಮಾನ ನಿಲ್ದಾಣವನ್ನು ಶಹೀದ್ ಭಗತ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ.

ಇಂದು ಪಂಜಾಬಿನ ಚಂಡೀಗಢದಲ್ಲಿ ನಡೆದ ಸಮಾರಂಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿಮಾನ ನಿಲ್ದಾಣಕ್ಕೆ ಅಧಿಕೃತವಾಗಿ ನಾಮಕರಣ ಮಾಡಿದರು. ಕಾರ್ಯಕ್ರಮದಲ್ಲಿ ಪಂಜಾಬ್ ಮತ್ತು ಹರಿಯಾಣದ ರಾಜ್ಯಪಾಲರಾದ ಬನ್ವಾರಿಲಾಲ್ ಪುರೋಹಿತ್ ಮತ್ತು ಬಂಡಾರು ದತ್ತಾತ್ರಯ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಮತ್ತು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಸಹ ಭಾಗವಹಿಸಿದ್ದರು. ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಜನರಲ್ ವಿಕೆ ಸಿಂಗ್ (ನಿವೃತ್ತ) ಮತ್ತು ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಕೇಶ್ ರಂಜನ್ ಸಹಾಯ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!