ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು: ಪಂಜಾಬ್, ಹರಿಯಾಣ ರಾಜ್ಯಗಳಿಂದ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ಜಂಟಿ ರಾಜಧಾನಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ನಿರ್ಧರಿಸಲಾಗಿದೆ. ಈ ವಿಮಾನ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹೆಸರಿಡಲಾಗುವುದು. ಈ ನಿರ್ಧಾರಕ್ಕೆ ಎರಡೂ ರಾಜ್ಯಗಳ ಸರ್ಕಾರಗಳು ಒಮ್ಮತ ಸೂಚಿಸಿವೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಮತ್ತು ಹರಿಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಸಿಂಗ್ ಚೌತಾಲಾ ಇಬ್ಬರು ನಾಯಕರು ಭೇಟಿಯಾಗಿ ಈ ಬಗ್ಗೆ ಚರ್ಚಿಸಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಈ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ತಮ್ಮ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದ್ದು, ಚಂಡೀಗಢ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಭಗತ್ ಸಿಂಗ್ ಅಂತರಾಷ್ಟ್ರೀಯ ಚಂಡೀಗಢ ವಿಮಾನ ನಿಲ್ದಾಣವನ್ನಾಗಿ ಬದಲಾಯಿಸಲು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳು ಒಪ್ಪಿಕೊಂಡಿವೆ. ಈ ನಿಟ್ಟಿನಲ್ಲಿ ಇಂದು ನಾನು ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಅವರನ್ನು ಭೇಟಿ ಮಾಡಿದ್ದೇನೆ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಸರ್ಕಾರದ ಪ್ರಕ್ರಿಯೆಗಳು ಶೀಘ್ರದಲ್ಲೇ ಪೂರ್ಣಗೊಂಡ ನಂತರ ವಿಮಾನ ನಿಲ್ದಾಣಕ್ಕೆ ಅಧಿಕೃತವಾಗಿ ಭಗತ್ ಸಿಂಗ್ ಹೆಸರನ್ನು ಇಡಲಾಗುವುದು ಎಂದು ಸರ್ಕಾರಿ ಮೂಲಗಳು ಬಹಿರಂಗಪಡಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!