ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್‌ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾಲಯದ ಬಾಲಕಿಯರ ಹಾಸ್ಟೆಲ್‌ನಿಂದ ಆಕ್ಷೇಪಾರ್ಹ ವೀಡಿಯೊಗಳು ಸೋರಿಕೆಯಾದ್ದರಿಂದ ಸೃಷ್ಟಿಯಾದ ಪ್ರತಿಭಟನೆಗಳ ಬೆನ್ನಲ್ಲೇ ಇಡೀ ವಿಶ್ವವಿದ್ಯಾಲಯವನ್ನು ಕ್ಲೋಸ್ ಮಾಡಲಾಗಿದೆ. ಸೆಪ್ಟೆಂಬರ್ 24 ರವರೆಗೆ ವಿಶ್ವವಿದ್ಯಾಲಯವನ್ನು ಮುಚ್ಚಲಾಗಿದೆ ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸೋಮವಾರ ಪ್ರಕಟಿಸಿದೆ.
ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವೀಡಿಯೊಗಳನ್ನು ಸಹ ವಿದ್ಯಾರ್ಥಿನಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂಬ ಆರೋಪದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ದೀರ್ಘ ರಜೆ ಹಿನ್ನೆಲೆ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಿಂದ ವಿದ್ಯಾರ್ಥಿಗಳು ತಮ್ಮ ತಮ್ಮ ಊರಿನತ್ತ ಪ್ರಯಾಣ ಬೆಳೆಸುತ್ತಿದ್ದಾರೆ. ವಿದ್ಯಾರ್ಥಿಗಳು ತಮ್ಮ ಲಗೇಜ್‌ಗಳನ್ನು ಹೊತ್ತುಕೊಂಡು ಆವರಣದಿಂದ ಹೊರ ಹೋಗುತ್ತಿರುವ ದೃಶ್ಯಗಳು ಕಂಡುಬಂದವು.