ಕಳಚಿತು ಟಾಲಿವುಡ್‌ನ ಮತ್ತೊಂದು ಕೊಂಡಿ, ಹಿರಿಯ ನಟ ಚಂದ್ರಮೋಹನ್‌ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಯಕ ನಟನಾಗಿ, ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಹಲವು ಚಿತ್ರಗಳ ಮೂಲಕ ತೆಲುಗು, ತಮಿಳು ಪ್ರೇಕ್ಷಕರ ಮನಗೆದ್ದಿದ್ದ ನಟ ಚಂದ್ರಮೋಹನ್ ಅನಾರೋಗ್ಯದಿಂದಾಗಿ ಇಂದು ಮೃತಪಟ್ಟಿದ್ದಾರೆ. 81ವರ್ಷ ವಯಸ್ಸಿನ ಚಂದ್ರಮೋಹನ್‌, ವಯೋಸಹಜ ಕಾಯಿಲೆ ಜೊತೆಗೆ ಹೃದಯ ಸಂಬಂಧಿ ಆರೋಗ್ಯ ಸಮಸ್ಯೆಗಳಿಂದ ಹೈದರಾಬಾದ್‌ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 9.45ಕ್ಕೆ ಚಂದ್ರಮೋಹನ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಇವರ ನಿಧನದ ಸುದ್ದಿ ತಿಳಿದು ಅಭಿಮಾನಿಗಳು ಹಾಗೂ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

ಮೃತರು ಪತ್ನಿ ಜಲಂಧರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು ಮತ್ತು ನಾಳೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸೋಮವಾರ ಹೈದರಾಬಾದ್ ಮಹಾಪ್ರಸ್ಥಾನದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!