ಚಂದ್ರಬಾಬು ನಾಯ್ಡು ನ್ಯಾಯಾಂಗ ಬಂಧನ ಅ.19ರ ವರೆಗೆ ವಿಸ್ತರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನ ಅವಧಿಯನ್ನು ಎಸಿಬಿ ನ್ಯಾಯಾಲಯವು ಅಕ್ಟೋಬರ್‌ 19ರವರೆಗೆ ವಿಸ್ತರಿಸಿ ಗುರುವಾರ ಆದೇಶಿಸಿದೆ.

ಕೌಶಲ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಬಂಧನದಲ್ಲಿರುವ ನಾಯ್ಡು ಅವರ ನ್ಯಾಯಾಂಗ ಬಂಧನ ಅವಧಿಯನ್ನು ಎಸಿಬಿ ನ್ಯಾಯಾಲಯ ಮೂರನೇ ಬಾರಿಗೆ ವಿಸ್ತರಿಸಿದೆ.

ಎರಡನೇ ಬಾರಿಗೆ ವಿಸ್ತರಿಸಿದ್ದ ನ್ಯಾಯಾಂಗ ಬಂಧನ ಅವಧಿ ಗುರುವಾರಕ್ಕೆ ಕೊನೆಗೊಂಡಿತ್ತು.

ನಾಯ್ಡು ಅವರ ಜಾಮೀನು ಅರ್ಜಿ ಮತ್ತು ಆಂಧ್ರಪ್ರದೇಶ ಸಿಐಡಿ ಪೊಲೀಸರು ಕಸ್ಟಡಿಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಶುಕ್ರವಾರಕ್ಕೆ ಮುಂದೂಡಿದೆ.

ಸೆ. 23 ಮತ್ತು 24 ರಂದು ನಡೆದ ಮೊದಲ ಎರಡು ದಿನಗಳ ಕಸ್ಟಡಿ ವಿಚಾರಣೆಯಲ್ಲಿ ತನಿಖಾಧಿಕಾರಿಗಳಿಗೆ ಬಾಬು ಅವರು ಸಹಕರಿಸದ ಕಾರಣ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಐದು ದಿನಗಳ ಕಸ್ಟಡಿಗೆ ಒಪ್ಪಿಸುವಂತೆ ಸಿಐಡಿ ಪೊಲೀಸರು ನ್ಯಾಯಾಲಯವನ್ನು ಕೋರಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!