ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ 12ರಂದು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಸಂಜೆ 4.55ಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಟಿಡಿಪಿ ಈ ಕುರಿತು ಮಾಹಿತಿ ನೀಡಿದ್ದು, ಜೂನ್ 12 ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಅಭಿಮಾನಿಗಳಿಗೆ ಇದು ಅತ್ಯಂತ ಸಂತಸದ ಕ್ಷಣವಾಗಿದೆ ಎಂದು ಹೇಳಿದೆ.
ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಟಿಡಿಪಿ ಯಾವುದಾದರೂ ನಿರ್ದಿಷ್ಟ ಸಚಿವಾಲಯದ ಬೇಡಿಕೆಗಳನ್ನು ಇರಿಸಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಟಿಡಿಪಿ ನಾಯಕ ರಘುರಾಮ ಕೃಷ್ಣರಾಜು, ನಾನು ಹಾಗೆ ಯೋಚಿಸುವುದಿಲ್ಲ. ಏಕೆಂದರೆ ಅದು ನನ್ನ ಪ್ರತಿಕ್ರಿಯೆಯ ವಿಷಯವಲ್ಲ. ಆದರೆ, ನಮ್ಮ ಪಕ್ಷದ ನಾಯಕರು ಬೇಡಿಕೆಯಿಡುವ ರೀತಿಯ ವ್ಯಕ್ತಿಯಲ್ಲ. ಅವರ ಉತ್ತಮ ಸಂಬಂಧದ ಆಧಾರದ ಮೇಲೆ ನಮ್ಮ ಪಕ್ಷಕ್ಕೆ ಏನು ಸಿಗಬೇಕೋ ಅದು ಸಿಗುತ್ತದೆ ಎಂದು ಹೇಳಿದ್ದಾರೆ.
ಟಿಡಿಪಿ ಮುಖ್ಯಸ್ಥ ನಾರಾ ಚಂದ್ರಬಾಬು ನಾಯ್ಡು ಅವರು ಇಂದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಟಿಡಿಪಿ ಬೆಂಬಲವನ್ನು ದೃಢಪಡಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ನರೇಂದ್ರ ಮೋದಿ ಭಾರತಕ್ಕೆ ಸರಿಯಾದ ಸಮಯದಲ್ಲಿ ಸರಿಯಾದ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.