ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂದ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಅವರ ಗೃಹ ಬಂಧನ ಅರ್ಜಿಯನ್ನು ಮಂಗಳವಾರ ಎಸಿಬಿ ನ್ಯಾಯಾಲಯ ವಜಾಗೊಳಿಸಿದೆ.
ನ್ಯಾಯಾಂಗ ಬಂಧನದ ಅವಧಿಗೆ ಜೈಲಿನ ಭದ್ರತೆಯ ಎಲ್ಲಾ ಅಂಶಗಳನ್ನು ಸಿಐಡಿ ಸ್ಪಷ್ಟವಾಗಿ ಹೇಳಿದೆ ಎಂದು ನ್ಯಾಯಾಧೀಶರು ಹೇಳಿದರು.
ಕೌಶಲ್ಯಾಭಿವೃದ್ಧಿ ಹಗರಣದಲ್ಲಿ ಭ್ರಷ್ಟಾಚಾರ(Skill development scam) ಆರೋಪದ ಮೇಲೆ ನಾಯ್ಡು ಅವರನ್ನು ಶನಿವಾರ ಬಂಧಿಸಲಾಗಿತ್ತು. ಬಿಗಿ ಭದ್ರತೆಯ ನಡುವೆ ಅವರನ್ನು ಸೋಮವಾರ ಬೆಳಗ್ಗೆಯಿಂದ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.