ಚಂದ್ರಶೇಖರ್ ಸಾವಿನ ಪ್ರಕರಣ ಎಲ್ಲ ಆಯಾಮಗಳಲ್ಲಿ ‌ತನಿಖೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಹೊಸದಿಗಂತ ವರದಿ, ಬಾಗಲಕೋಟೆ:
ಶಾಸಕ ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್‌ ಅವರ ಸಾವಿನ ಪ್ರಕರಣ ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಮಂತ್ರಿ ಅರಗ ಜ್ಞಾನೇಂದ್ರ ತಿಳಿಸಿದರು.
ಶುಕ್ರವಾರ ಕೂಡಲಸಂಗಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಚಾರ್ಯ ಸಹೋದರನ ಮಗ ಕಾಣೆಯಾದ ಮಾರನೇ ದಿನವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಕೆಲಸ ಮಾಡಿದ ಪ್ರಯತ್ನದಿಂದ ಕಾರು, ಮೃತದೇಹ ಪತ್ತೆಯಾಗಿದೆ ಎಂದರು.
ಎಡಿಜಿಪಿ ಅಲೋಕಕುಮಾರ, ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸಂಜೆ ರೇಣುಕಾಚಾರ್ಯ‌ ಅವರ ನಿವಾಸಕ್ಕೆ ಭೇಟಿ ನೀಡುವುದಾಗಿ ಸಚಿವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!