ಚಂದ್ರಯಾನ 3 ಲ್ಯಾಂಡಿಂಗ್‌ ಸೈಟ್‌ಗೆ ‘ಶಿವ ಶಕ್ತಿ’ ಎಂದು ಹೆಸರು: ಖಗೋಳ ಒಕ್ಕೂಟದಿಂದ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಚಂದ್ರಯಾನ-3 (Chandrayaan-3)ಮಿಷನ್‌ನ ವಿಕ್ರಂ ಲ್ಯಾಂಡರ್ (Vikram Lander) ಚಂದ್ರನ ಮೇಲೆ ಸ್ಪರ್ಶಿಸಿದ ಸ್ಥಳಕ್ಕೆ ‘ಶಿವ ಶಕ್ತಿ’ ಎಂದು ಹೆಸರಿಡಲು ಅಂತಾರಾಷ್ಟ್ರೀಯ ಖಗೋಳ ಒಕ್ಕೂಟ (IAU) ಅನುಮೋದನೆ ನೀಡಿದೆ.

ಚಂದ್ರನ ಮೇಲ್ಮೈಯಲ್ಲಿ ವಿಕ್ರಂ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವ ಶಕ್ತಿ’ (Shiv Shakti) ಎಂಬ ಹೆಸರಿನಿಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆದಿದ್ದರು. ಇದಾದ 7 ತಿಂಗಳ ಬಳಿಕ ಈ ಸ್ಥಳಕ್ಕೆ ಅಧಿಕೃತವಾಗಿ ‘ಶಿವ ಶಕ್ತಿ’ ಎಂದು ಹೆಸರಿಡಲು ಐಎಯು ಅನುಮೋದನೆ ನೀಡಿದೆ.

ಚಂದ್ರಯಾನ-3 ಲ್ಯಾಂಡಿಂಗ್ ಸೈಟ್‌ಗೆ ‘ಸ್ಪ್ಯಾಟಿಯೋ ಶಿವ ಶಕ್ತಿ’ ಎಂಬ ಹೆಸರನ್ನಿರಿಸುವಂತೆ ಪ್ಯಾರಿಸ್ ಮೂಲದ ಐಎಯು ಮಾರ್ಚ್ 19 ರಂದು ಅನುಮೋದನೆ ನೀಡಿದೆ. ಗ್ಯಾಜೆಟಿಯರ್ ಆಫ್ ಪ್ಲಾನೆಟರಿ ನಾಮಕರಣದ ಪ್ರಕಾರ ಖಗೋಳ ಸಂಸ್ಥೆಯು ಅನುಮೋದಿಸಿದ ಗ್ರಹಗಳ ಹೆಸರುಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸುತ್ತದೆ.

ಆಗಸ್ಟ್ 26, 2023ರಂದು ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ ಟ್ರ‍್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಮಿಷನ್ ಕಂಟ್ರೋಲ್ ಕಾಂಪ್ಲೆಕ್ಸ್‌ನಲ್ಲಿ ಆಗಸ್ಟ್ 23, ಚಂದ್ರಯಾನ-3 ಚಂದ್ರನ ಮೇಲೆ ಇಳಿದ ದಿನವನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಕರೆಯಲಾಗುತ್ತದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದರು. ಅಲ್ಲದೇ ಚಂದ್ರಯಾನ-2 ತನ್ನ ಹೆಜ್ಜೆಗುರುತುಗಳನ್ನು ಬಿಟ್ಟ ಸ್ಥಳವನ್ನು ‘ತಿರಂಗ’ ಎಂದು ಕರೆಯಲಾಗುವುದು ಎಂದಿದ್ದರು.

ಆಗಸ್ಟ್ 23, 2023ರಂದು ಚಂದ್ರಯಾನ-3 ಮಿಷನ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಆಗುವ ಮೂಲಕ ಇತಿಹಾಸವನ್ನು ಸೃಷ್ಟಿಸಿತು. .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!