ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಂದ್ರನ ಮೇಲೆ ಗಗನನೌಕೆ ಇಳಿಸಿ ಅದರ ಅಧ್ಯಯನ ಮಾಡುವ ಉದ್ದೇಶ ಹೊಂದಿರುವ ಚಂದ್ರಯಾನ-೩ ಉಡಾವಣೆಗೆ ಕೌಂಟ್‌ಡೌನ್ ಆರಂಭವಾಗಿದೆ.
ಚಂದ್ರಯಾನ-3 ಉಡಾವಣೆಯನ್ನು ಕಣ್ತುಂಬಿಕೊಳ್ಳುವ ಅವಕಾಶ ಇದ್ದು, ಇಸ್ರೋ ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಗೂ ಇಸ್ರೋ ಯುಟ್ಯೂಬ್ ಚಾನೆಲ್‌ನಲ್ಲಿ ಲೈವ್ ಟೆಲಿಕಾಸ್ಟ್ ನೋಡಬಹುದಾಗಿದೆ.
ಇನ್ನು ಬೆಂಗಳೂರಿನ ನೆಹರು ತಾರಾಲಯದಲ್ಲಿಯೂ ಲೈವ್ ಟೆಲಿಕಾಸ್ಟ್ ವ್ಯವಸ್ಥೆ ಮಾಡಲಾಗಿದ್ದು, ಕನ್ನಡದಲ್ಲಿ ಮಾಹಿತಿ ಕೂಡ ನೀಡಲಾಗುತ್ತಿದೆ.