ಜುಲೈ 14 ರಂದು ಚಂದ್ರಯಾನ-3 ರ ಉಡಾವಣೆ: ಇಸ್ರೋ ಅಧಿಕೃತ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಚಂದ್ರಯಾನ-3 ರ ಉಡಾವಣೆಯು ಜುಲೈ 14 ರಂದು ಮಧ್ಯಾಹ್ನ 2.35 ಕ್ಕೆ ಬಾಹ್ಯಾಕಾಶ ನೌಕೆಯ ಮೂಲಕ ಮಾಡಲಿದೆ ಎಂದು ಇಸ್ರೋ ಅಧಿಕೃತವಾಗಿ ಮಾಹಿತಿ ನೀಡಿದೆ.

ಈ ಹಿಂದೆ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರು ಚಂದ್ರಯಾನವನ್ನು ಜುಲೈ 12 ಮತ್ತು ಜುಲೈ 19 ರ ನಡುವೆ ಉಡಾವಣೆ ಮಾಡಲಾಗುವುದು ಎಂದು ತಿಳಿಸಿದ್ದರು.

ಇದೀಗ ಚಂದ್ರಯಾನ-3 ಯೋಜನೆಯ ಎಲ್ಲಾ ಭಾಗಗಳನ್ನು ಜೋಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಚಂದ್ರಯಾನ-3 ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವಲ್ಲಿ ಯಶಸ್ವಿಯಾದರೆ, ಭಾರತ ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಲಿದೆ. ಈ ಹಿಂದೆ ಅಮೆರಿಕ, ರಷ್ಯಾ ಮತ್ತು ಚೀನಾ ತಮ್ಮ ಬಾಹ್ಯಾಕಾಶ ನೌಕೆಯನ್ನು ಚಂದ್ರನ ಮೇಲೆ ಇಳಿಸಿದ್ದವು.

2019ರ ಜುಲೈ 22 ರಂದು ಇಸ್ರೋ ಚಂದ್ರಯಾನ-2 ಯೋಜನೆಯನ್ನು ಉಡಾವಣೆ ಮಾಡಿತ್ತು. ಅದಾದ ನಾಲ್ಕು ವರ್ಷಗಳ ಬಳಿಕ ಚಂದ್ರಯಾನ-3 ಯೋಜನೆಯ ಮೂಲಕ ಚಂದ್ರನ ನೆಲದ ಮೇಲೆ ಕಾಲಿಡುವ ತನ್ನ ಪ್ರಯತ್ನವನ್ನು ಮುಂದುವರಿಸಲಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!