ಚಂದ್ರಯಾನ -3 ಯಶಸ್ಸು | ಪ್ರತಿಯೊಬ್ಬ ದೇಶವಾಸಿಗೂ ಹೆಮ್ಮೆಯ ಕ್ಷಣವೆಂದ ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ,ಬೆಳಗಾವಿ:

ಚಂದ್ರಯಾನ – 3 ಯಶಸ್ವಿಯಾಗಿದ್ದು, ಪ್ರತಿಯೊಬ್ಬ ದೇಶವಾಸಿಗೂ ಇದೊಂದು ಹೆಮ್ಮೆಯ ಕ್ಷಣವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸಂತಸ ವ್ಯಕ್ತ ಪಡಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಸ್ರೋದ ಪರಿಶ್ರಮದಿಂದ ಚಂದ್ರಯಾನ ಯಶಸ್ವಿಯಾಗಿದೆ.
ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ಧೃವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!