ಚಂದ್ರಯಾನ-3 ಸಕ್ಸಸ್: ಭಾರತಕ್ಕೆ NASA ಆಡಳಿತಾಧಿಕಾರಿ ಅಭಿನಂದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಂದ್ರಯಾನ-3 (Chandrayaan-3) ಯಶಸ್ವಿಯಾದ್ದು, ಈ ಹಿನ್ನೆಲೆ ನಾಸಾ (NASA) ಆಡಳಿತಾಧಿಕಾರಿ ಬಿಲ್ ನಲ್ಸೆನ್ (Bill Nelson) ಟ್ವೀಟ್ (Tweet) ಮೂಲಕ ಭಾರತಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸಂಜೆ 6:04ರ ಹೊತ್ತಿಗೆ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿದ್ದು, ಪ್ರತಿಯೊಬ್ಬ ಭಾರತೀಯ ಪ್ರಜೆ ಹೆಮ್ಮೆ ಪಡುವ ಕ್ಷಣ ಇದಾಗಿದೆ. ಈ ಕುರಿತು ನಾಸಾ ಆಡಳಿತಾಧಿಕಾರಿ ಬಿಲ್ ನಲ್ಸೆನ್ ಟ್ವೀಟ್ ಮಾಡಿ ಇಸ್ರೋ ತಂಡಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ 4ನೇ ರಾಷ್ಟ್ರವಾಗಿರುವ ಭಾರತಕ್ಕೆ ಅಭಿನಂದನೆಗಳು. ಈ ಕಾರ್ಯಾಚರಣೆಯಲ್ಲಿ ನಿಮ್ಮ ಪಾಲುದಾರರಾಗಲು ನಮಗೆ ಸಂತೋಷವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!