Tuesday, October 3, 2023

Latest Posts

ಚಂದ್ರಯಾನ-3 ಯಶಸ್ಸು: ಟೀಮ್ ಇಸ್ರೋ ಗೆ ಪ್ರಧಾನಿ ಮೋದಿ ಅಭಿನಂದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ಹೊಸ ದಾಖಲೆ ಬರೆದಿದೆ.

ಈ ಕ್ಷಣದಲ್ಲಿ ಸೌತ್ ಆಫ್ರಿಕಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಇಸ್ರೋ ನೇರ ಪ್ರಸಾರದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ ಯಶಸ್ವಿ ಲ್ಯಾಂಡಿಂಗ್‌ಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

ಅಮೃತಕಾಲದಲ್ಲಿ ಯಶಸ್ಸಿನ ಅಮೃತ ಸುರಿದಿದೆ ಎಂದು ಬಣ್ಣಿಸಿದರು.

ಚಂದ್ರಯಾನ ಮಿಷನ್ ಚಂದ್ರನ ಮೇಲೆ ಕಾಲಿಟ್ಟ ನಂತರ ಪ್ರಧಾನಿ ಮೋದಿ ಅವರು ಇಸ್ರೋ ಮತ್ತು ಇಡೀ ದೇಶವನ್ನು ಅಭಿನಂದಿಸಿದ್ದಾರೆ. ಈ ಕ್ಷಣ ಅಭೂತಪೂರ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ನಾವು ಬಾಹ್ಯಾಕಾಶ ಕ್ಷೇತ್ರದಲ್ಲಿ ನವ ಭಾರತದ ಹೊಸ ಯುಗಕ್ಕೆ ಸಾಕ್ಷಿಯಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!