‘ಚಂದ್ರಯಾನ-3’ ಸಕ್ಸಸ್: ಇಸ್ರೋ ಸಾಧನೆಗೆ ರಾಷ್ಟ್ರಪತಿ,ಅಮಿತ್​ ಶಾ, ಸಿದ್ದರಾಮಯ್ಯ ಸಹಿತ ಗಣ್ಯರಿಂದ ಅಭಿನಂದನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಂದ್ರಯಾನ 3 ಚಂದ್ರನಲ್ಲಿ ಯಶಸ್ವಿ ಲ್ಯಾಂಡಿಂಗ್‌ ಆಗಿದ್ದು, ಇಸ್ರೋ ವಿಜ್ಞಾನಿಗಳ ಪರಿಶ್ರಮಕ್ಕೆ ಮಹತ್ವದ ಫಲ ಸಿಕ್ಕಿದೆ.

ಈ ಸಾಧನೆ ಇಡೀ ಭಾರತವೇ ಅಭಿನಂದನೆ ಸಲ್ಲಿಸುತ್ತಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಂದ್ರಯಾನ 3 ಚಂದ್ರನಲ್ಲಿ ಯಶಸ್ವಿ ಲ್ಯಾಂಡಿಂಗ್‌ನೊಂದಿಗೆ, ನಮ್ಮ ವಿಜ್ಞಾನಿಗಳು ಇತಿಹಾಸವನ್ನು ನಿರ್ಮಿಸಿದ್ದಾರೆ. ಮಾತ್ರವಲ್ಲದೆ ಭೌಗೋಳಿಕ ಕಲ್ಪನೆಯನ್ನು ಮರುರೂಪಿಸಿದ್ದಾರೆ. ಇದು ನಿಜವಾಗಿಯೂ ಮಹತ್ವದ ಸಾಧನೆಯಾಗಿದೆ ಎಂದು ಟ್ವೀಟ್​​ ಮೂಲಕ ಖುಷಿ ಹಂಚಿಕೊಂಡಿದ್ದಾರೆ.

ಅಭಿನಂದನೆ ತಿಳಿಸಿದ ಕೇಂದ್ರ ಗೃಹ ಸಚಿವ
ಚಂದ್ರಯಾನ -3 ಯಶಸ್ಸಿಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅಭಿನಂದನೆ ತಿಳಿದ್ದಾರೆ. ಚಂದ್ರಯಾನ -3 ಯಶಸ್ಸಿನೊಂದಿಗೆ ಭಾರತವು ಚಂದ್ರನ ದಕ್ಷಿಣ ಧ್ರುವವನ್ನು ಮುಟ್ಟಿದ ಮೊದಲ ರಾಷ್ಟ್ರವಾಗಿದೆ ಎಂದು ತಿಳಿಸಿದ್ದಾರೆ.

ಚಂದ್ರಯಾನ -3 ಯಶಸ್ಸಿಗೆ ಸಿದ್ದರಾಮಯ್ಯ ಅಭಿನಂದನೆ
ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ತಿಳಿಸಿದ್ದಾರೆ.

ರಾಹುಲ್​ ಗಾಂಧಿ ಅಭಿನಂದನೆ
ಇಂದಿನ ಪ್ರವರ್ತಕ ಸಾಧನೆಗಾಗಿ ಇಸ್ರೋ ತಂಡಕ್ಕೆ ಅಭಿನಂದನೆಗಳು. ನಮ್ಮ ವೈಜ್ಞಾನಿಕ ಸಮುದಾಯದ ದಶಕಗಳ ಪ್ರಚಂಡ ಚತುರತೆ ಮತ್ತು ಕಠಿಣ ಪರಿಶ್ರಮದ ಫಲವಾಗಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಮೃದುವಾದ ಲ್ಯಾಂಡಿಂಗ್ ಆಗಿದೆ. ಯುವ ಕನಸುಗಾರರಿಗೆ ಸ್ಫೂರ್ತಿ ನೀಡುತ್ತದೆ ಎಂದು ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಟ್ವಿಟರ್​ ಮೂಲಕ ಅಭಿನಂದನೆಯನ್ನು ತಿಳಿಸಿದ್ದಾರೆ.

ಇಸ್ರೋ ಸಾಧನೆಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್​​ ಅಭಿನಂದನೆ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಸ್ರೋ ಸಾಧನೆಗೆ ಅಭಿನಂದನೆ ತಿಳಿಸಿದ್ದಾರೆ. ಚಂದ್ರಯಾನ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ನವ ಭಾರತದ ಸಾಮರ್ಥ್ಯಗಳು ಮತ್ತು ಶಕ್ತಿಯ ಪ್ರಬಲ ಪ್ರದರ್ಶನವಾಗಿದೆ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅಭಿನಂದನೆ
ಭಾರತ ಮಾಡಿದ ಸಾಧನೆ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್​​ ಮೂಲಕ ಅಭಿನಂದನೆಯನ್ನು ತಿಳಿಸಿದ್ದಾರೆ. ಚಂದ್ರಯಾನ 3ರ ಯಶಸ್ಸು ಪ್ರತಿಯೊಬ್ಬ ಭಾರತೀಯನ ಸಾಮೂಹಿಕ ಯಶಸ್ಸು. 140 ಕೋಟಿ ಆಕಾಂಕ್ಷೆಗಳನ್ನು ಹೊಂದಿರುವ ಸಂಭ್ರಮದ ರಾಷ್ಟ್ರವು ತನ್ನ ಆರು ದಶಕಗಳ ಸುದೀರ್ಘ ಬಾಹ್ಯಾಕಾಶ ಸೇವೆಯಲ್ಲಿ ಇಂದು ಮತ್ತೊಂದು ಸಾಧನೆಗೆ ಸಾಕ್ಷಿಯಾಗಿದೆ. ನಮ್ಮ ವಿಜ್ಞಾನಿಗಳು, ಬಾಹ್ಯಾಕಾಶ ಇಂಜಿನಿಯರ್‌ಗಳು, ಸಂಶೋಧಕರು ಮತ್ತು ಈ ಕಾರ್ಯಾಚರಣೆಯನ್ನು ಭಾರತಕ್ಕೆ ವಿಜಯವಾಗಿಸುವಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರದ್ದು ಗಮನಾರ್ಹ ಶ್ರಮ, ಅಪ್ರತಿಮ ಜಾಣ್ಮೆ ಮತ್ತು ಅಚಲವಾದ ಸಮರ್ಪಣೆಗೆ ನಾವು ಋಣಿಯಾಗಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!