ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಂದ್ರಯಾನ-3ರ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದನೆ ಸಲ್ಲಿಸಿದ್ದಾರೆ.
ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಆದರದಿಂದ ಸ್ವಾಗತಿಸಿ, ಚಂದ್ರಯಾನ-3ರ ಯಶಸ್ಸಿನ ಹಿನ್ನೆಲೆಯಲ್ಲಿ ಹೂಗುಚ್ಛ ನೀಡಿ ಅಭಿನಂದನೆಗಳನ್ನು ಸಲ್ಲಿಸಿದರು.
ಇಸ್ರೋ ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನತ್ತ ಕೂಡ ಯಾನ ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಇಂದು ಆದಿತ್ಯ ಎಲ್-1 ಉಡಾವಣೆ ಮಾಡಲಾಗಿದೆ.