Monday, September 25, 2023

Latest Posts

ಚಂದ್ರಯಾನ-3: `ವಿಕ್ರಮ್ ಲ್ಯಾಂಡರ್’ ಲ್ಯಾಂಡಿಂಗ್ ಪ್ರಕ್ರಿಯೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ತಲುಪಲು ಹಂತಿಮ ಹಂತಕ್ಕೆ ಬಂದಿದ್ದು, ವಿಕ್ರಮ್ ಲ್ಯಾಂಡರ್ ನ ವೇಗ ತಗ್ಗಿಸುವ ಪ್ರಕ್ರಿಯೆ ಆರಂಭವಾಗಿದೆ. ಸಂಜೆ 6.04 ಗಂಟೆ ವೇಳೆಗೆ ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿಯಲು ಸಜ್ಜಾಗಿದೆ.

ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯೋಜನೆ ಬಹುತೇಕ ಯಶಸ್ವಿಯ ಹಂತದಲ್ಲಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂದರೆ ಇಂದು ಸಂಜೆ 6 ಗಂಟೆ 4 ನಿಮಿಷ ಸುಮಾರಿಗೆ ಚಂದ್ರಯಾನದ ನೌಕೆ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ.

ಸದ್ಯ ಪ್ರತಿಗಂಟೆಗೆ ಸರಿಸುಮಾರು ಆರೂವರೆ ಸಾವಿರ ಕಿಲೋಮೀಟರ್ ವೇಗದಲ್ಲಿ ಚಂದ್ರನ ಮೇಲ್ಮೈನತ್ತ ಇಳಿಯುತ್ತಿದೆ. ಹಂತ ಹಂತವಾಗಿ ಲ್ಯಾಂಡರ್ ವೇಗವನ್ನು ತಗ್ಗಿಸುವ ಪ್ರಕ್ರಿಯೆ ಆರಂಭಗೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!