ಹೊಸ ದಿಗಂತ ಡಿಜಿಟಲ್ ಡೆಸ್ಕ್ :
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬ ಆಗಲಿದ್ದು, ಬಹಳ ಸರಳವಾಗಿ ಗೃಹಲಕ್ಷ್ಮೀ ಯೋಜನೆ ಜನರಿಗೆ ತಲುಪಬೇಕು ಎಂದು ಯೋಜನೆಯಲ್ಲಿ ಕೆಲವು ಬದಲಾವಣೆ ಮಾಡಲಾಗುತ್ತಿದ್ದು, ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚನೆ ನೀಡಿದ್ದೇವೆ. ಮೊದಲು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಇದರ ಜೊತೆಗೆ ಗ್ರಾಪಂನ ಬಾಪೂಜಿ ಸೇವಾ ಕೇಂದ್ರದಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಲು ವಿಳಂಬವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಚಿಕ್ಕಮಗಳೂರಿನ ಗೌರಿಗದ್ದೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗೃಹಲಕ್ಷ್ಮೀ ಯೋಜನೆ ಜನರಿಗೆ ಬಳಷ್ಟು ಸರಳವಾಗಿ ಸಿಗಬೇಕು. ಆ ನಿಟ್ಟಿನಲ್ಲಿ ಅರ್ಜಿಯನ್ನು ಸರಳೀಕರಣ ಮಾಡುವುದಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆ ನಿಟ್ಟಿನಲ್ಲಿ ಬದಲಾವಣೆ ನಡೆಯುತ್ತಿದೆ ಎಂದರು.
ಸರ್ಕಾರದ ಯೋಜನೆಯನ್ನು ಯಾರು ಮನೆ ಮನೆ ಮುಟ್ಟಿಸಲು ಪ್ರಜಾ ಪ್ರತಿನಿಧಿ ಆರಂಭಿಸುತ್ತಿದ್ದೇವೆ. ಈಗಾಗಲೇ ಅಧಿಕಾರಿಗಳು ಸಾಫ್ಟ್ವೇರ್/ಅಪ್ಲಿಕೇಶನ್ ಅನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ. ಅತ್ಯಂತ ಶೀಘ್ರ ಅರ್ಜಿ ಪ್ರಕ್ರಿಯೆ ಆರಂಭವಾಗುತ್ತದೆ. ಆಗಸ್ಟ್ 17 ಅಥವಾ 18ರಂದು ಮನೆ ಯಜಮಾನಿ ಖಾತೆಗೆ ಹಣ ತಲಪುತ್ತದೆ ಎಂದು ತಿಳಿಸಿದರು.