January18, 2026
Sunday, January 18, 2026
spot_img

GST ವ್ಯವಸ್ಥೆಯಲ್ಲಿ ಬದಲಾವಣೆ: ದೇಶದ ಜನರಿಗೆ ಮೋದಿ ಸರ್ಕಾರದಿಂದ ದೀಪಾವಳಿ ಉಡುಗೊರೆ ಎಂದ ಹೆಚ್‌ಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರದಿಂದ ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಇದು ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು ಆತ್ಮನಿರ್ಭರ ಭಾರತವನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಜಿಎಸ್‌ಟಿ ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜೊತೆಗೆ, ಉದ್ಯಮಗಳು ಹಾಗೂ ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ (ಎಮ್‌ಎಸ್‌ಎಮ್‌ಇ) ಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Must Read

error: Content is protected !!