ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಹವಾಮಾನದಲ್ಲಿ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕೊಡಗು, ಹಾಸನ,ಮೈಸೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಳೆ ಬೀಳುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.
ಇಂದು ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣದ ನಡುವೆ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಮುನ್ಸೂಚನೆ ಇಲ್ಲ.



